12 ಸಾವಿರಕ್ಕೂ ಹೆಚ್ಚು ಬಾಲಕಿಯರು ಲೈಂಗಿಕ ಶೋಷಣೆಯ ಜಾಲದಿಂದ ಬಿಡುಗಡೆಯಾದರು. 52 ಸಾವಿರಕ್ಕೂ ಹೆಚ್ಚು ಜನ ಮಹಿಳೆಯರು ಮತ್ತು ಮಕ್ಕಳು ಮಾನವ ಕಳ್ಳ ಸಾಗಾಣಿಕೆಯ ಜಾಲದಿಂದ ಬಿಡಿಸಿಕೊಳ್ಳಲು ಕಾರಣವಾಯಿತು. ಸಾವಿರಾರು ಹೆಣ್ಣು ಮಕ್ಕಳ ಬದುಕು ಬದಲಿಸಿದ ನಿಜ ಜೀವನದ ನಾಯಕಿಯೇ ಅನುರಾಧ ಕೊಯಿರಾಲ. ಲೇಖಕಿ ವೀಣಾ ಹೇಮಂತ್ ಗೌಡ ಅವರ ಬದುಕಿಗೊಂದು ಸೆಲೆ ತಪ್ಪದೆ ಮುಂದೆ ಓದಿ..
ಸಾವಿರಾರು ಹೆಣ್ಣು ಮಕ್ಕಳ ಬದುಕು ಬದಲಿಸಿದ ನಿಜ ಜೀವನದ ನಾಯಕಿ. ಅನುರಾಧ ಕೊಯಿರಾಲ ನಿಜ. ದಶಕಗಳ ಕಾಲ ಆಕೆ ಯುದ್ಧ ರಂಗ ಸಮಾನವಾದ ಹೋರಾಟದಲ್ಲಿ ಮುಂಚೂಣಿ ಸ್ಥಾನದಲ್ಲಿ ಅತ್ಯಂತ ಸ್ಥಿರವಾಗಿ ನಿಂತು ಹೋರಾಡಿದ ಫಲವಾಗಿ ಸಾವಿರಾರು ಯುವತಿಯರ ಮಾನವ ಕಳ್ಳ ಸಾಗಾಣಿಕೆಯನ್ನು ತಪ್ಪಿಸಲು ಸಾಧ್ಯವಾಯಿತು. ಅತ್ಯಂತ ಪ್ರಭಾವಶಾಲಿಗಳು ಕೂಡ ಈ ಹೋರಾಟದಲ್ಲಿ ಪಾಲ್ಗೊಳ್ಳಲು, ಹೋರಾಟಗಾರರೊಂದಿಗೆ ತಮ್ಮನ್ನು ತಾವು ಗುರುತಿಸಿಕೊಳ್ಳಲು ಹೆದರುತ್ತಿದ್ದ ಸಮಯದಲ್ಲಿ ಆಕೆ ಅಚಲವಾಗಿ ನಿಂತಳು.
ಆಕೆಯ ಸ್ಥೈರ್ಯದ ನಡೆ, ಸತತ ಪ್ರಯತ್ನ ಹಾಗೂ ಕಾರ್ಯ ತತ್ಪರತೆಯ ಪರಿಣಾಮವಾಗಿ 12 ಸಾವಿರಕ್ಕೂ ಹೆಚ್ಚು ಬಾಲಕಿಯರು ಲೈಂಗಿಕ ಶೋಷಣೆಯ ಜಾಲದಿಂದ ಬಿಡುಗಡೆಯಾದರು. ಸರಿಸುಮಾರು 52 ಸಾವಿರಕ್ಕೂ ಹೆಚ್ಚು ಜನ ಮಹಿಳೆಯರು ಮತ್ತು ಮಕ್ಕಳು ಮಾನವ ಕಳ್ಳ ಸಾಗಾಣಿಕೆಯ ಜಾಲದಿಂದ ಬಿಡಿಸಿಕೊಳ್ಳಲು ಕಾರಣವಾಯಿತು. ಆಕೆಯೇ ಅನುರಾಧ ಕೊಯಿರಾಲ.

ನೇಪಾಳ ದೇಶದ ಅನುರಾಧ ಕೊಯಿರಾಲ ಅವರು ‘ಮಾಟಿ ನೇಪಾಲ’ ಎಂಬ ಸಂಸ್ಥೆಯೊಂದನ್ನು ಆರಂಭಿಸಿ ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿರುವ ಹೆಣ್ಣುಮಕ್ಕಳನ್ನು, ಮಹಿಳೆಯರನ್ನು ರಕ್ಷಿಸಲು ಆರಂಭಿಸಿದರು. ಹಾಗೆ ರಕ್ಷಿಸಿದ ಹೆಣ್ಣು ಮಕ್ಕಳಿಗೆ ವಸತಿಯನ್ನು ಕೂಡ ಒದಗಿಸಿದರು.
ಮುಂದಿನ ಹಂತದಲ್ಲಿ ಚಿಕ್ಕ ಬಾಲಕಿಯರಾದರೆ ಅವರಿಗೆ ಶಿಕ್ಷಣ ಕೊಡಿಸುವ ಜವಾಬ್ದಾರಿಯನ್ನು ನಿರ್ವಹಿಸಿದ ಅವರು ಮಹಿಳೆಯರಿಗೆ ಔದ್ಯೋಗಿಕ ಚಟುವಟಿಕೆಗಳನ್ನು ಕಲಿಯಲು ಪ್ರೋತ್ಸಾಹಿಸಿ, ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸುವ ಮೂಲಕ ಬದುಕನ್ನು ಕಟ್ಟಿಕೊಳ್ಳಲು ಪ್ರೋತ್ಸಾಹಿಸಿದರು. ಇದರ ಜೊತೆಗೆ ಮನೆಯನ್ನು ಬಿಟ್ಟು ಬಂದ, ತಪ್ಪಿಸಿಕೊಂಡು ಬಂದ ಹೆಣ್ಣು ಮಕ್ಕಳ ದುರ್ಬಲವಾದ ಮನಸ್ಥಿತಿಯನ್ನು ಹಾಗೂ ಕಳ್ಳ ಸಾಗಾಣಿಕೆಯಾಗುವ ಸಮಯದಲ್ಲಿ ಅವರು ಅನುಭವಿಸಿದ ವ್ಯಥೆಗಳ ಪರಿಣಾಮವಾಗಿ ಉಂಟಾದ ದೈಹಿಕ ಮಾನಸಿಕ ತೊಂದರೆಗಳನ್ನು ನಿವಾರಿಸಿಕೊಳ್ಳಲು ಪುನರ್ವಸತಿ ಯೋಜನೆಯ ಜೊತೆಗೆ ಸಮಾಲೋಚಕರ ತಜ್ಞ ವೈದ್ಯರ ನೆರವು ದೊರೆಯುವಂತೆ ಮಾಡಿದರು. ಅವರ ಪರವಾಗಿ ಕಾನೂನಾತ್ಮಕ ಬೆಂಬಲ ಹಾಗೂ ಪರಿಹಾರಗಳನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿದರು. ಬದುಕಿನಲ್ಲಿ ಹತಾಶೆಯನ್ನು ಅನುಭವಿಸಿದ್ದ ಹೆಣ್ಣು ಮಕ್ಕಳಿಗೆ, ಭವಿಷ್ಯವನ್ನು ಕಳೆದುಕೊಂಡ ಯುವತಿಯರಿಗೆ ಭರವಸೆಯ ದಾರಿ ತೋರಿದರು. ಇದು ಕೇವಲ ಕ್ರಿಯಾಶೀಲತೆಯಲ್ಲ ಇದೊಂದು ಧೈರ್ಯಶಾಲಿಯಾದ ದಿಟ್ಟವಾದ ಪ್ರಕ್ರಿಯೆ ಹೆಜ್ಜೆ.
ಇಡೀ ಜಗತ್ತು ನೆಮ್ಮದಿಯ ನಿದ್ರೆಯಲ್ಲಿ ಜಾರಿದಾಗ ಅನುರಾಧ ಕೆಂಪು ದೀಪದ ಜಿಲ್ಲೆಗಳಲ್ಲಿ ಗಡಿ ಭಾಗಗಳಲ್ಲಿ ಅತ್ಯಂತ ಅಪಾಯಕಾರಿ ನೆಟ್ವರ್ಕ್ ಗಳ ಮಧ್ಯದಲ್ಲಿ ಕಾರ್ಯನಿರ್ವಹಿಸುತ್ತಾ ತನ್ನ ನೇಪಾಳ ದೇಶದ ಹೆಣ್ಣು ಮಕ್ಕಳನ್ನು ಮರಳಿ ಮನೆಗೆ ಕರೆ ತರುವ ಪ್ರಯತ್ನದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡರು.
ಅಂತರಾಷ್ಟ್ರೀಯ ಮಾನ್ಯತೆಯನ್ನು ಪಡೆದಿರುವ ಆಕೆಯ ಈ ಕಾರ್ಯಕ್ಕೆ ಸಾಕಷ್ಟು ಪ್ರತಿಷ್ಠಿತ ಪ್ರಶಸ್ತಿಗಳು ಪುರಸ್ಕಾರಗಳು ಒದಗಿವೆ ಆದರೆ ಆಕೆಗೆ ನಿಜವಾಗಿಯೂ ದೊರೆತ ಪ್ರಶಸ್ತಿ ಯಾವುದು ಗೊತ್ತೇ ? ಸಾವಿರಾರು ಜನ ಹೆಣ್ಣು ಮಕ್ಕಳ ಬದುಕು ಪುನರ್ ನಿರ್ಮಾಣವಾಗಿದ್ದು ಅವರ ಭವಿಷ್ಯವನ್ನು ಕಾಪಿಟ್ಟದ್ದು ಹಾಗೂ ಕಳೆದು ಹೋದ ಅವರ ಧ್ವನಿಯನ್ನು ಅವರಿಗೆ ಮರಳಿಸಿ ಕೊಟ್ಟ ಅನುರಾಧ ಕೊಯಿರಾಲ ಅವರ ಶ್ಲಾಘನೀಯ ಕ್ರಮಕ್ಕೆ ಸಂತ್ರಸ್ತರ ನೆಮ್ಮದಿಯ ನಿಟ್ಟುಸಿರು ಆಕೆಯ ಪಾಲಿನ ನಿಜವಾದ ಪ್ರಶಸ್ತಿಯಾಗಿದೆ.
ಇಂತಹ ವ್ಯಕ್ತಿಯ ಸಾಧನೆಗೆ ಕೇವಲ ಗೌರವಿಸಿದರೆ ಸಾಲದು, ಆಕೆಗೆ ಜಾಗತಿಕ ಮನ್ನಣೆ ಕೂಡ ದೊರೆಯಲೇಬೇಕು. 21ನೇ ಶತಮಾನದಲ್ಲಿಯೂ ಮಹಿಳೆಯರ ಶೋಷಣೆ ಜಾರಿಯಲ್ಲಿರುವಾಗ ಅನುರಾಧ ಅಂಥವರು ನಮಗೆ ಮಾನವೀಯತೆ ಇನ್ನೂ ಸಾಕಷ್ಟು ಜನರಲ್ಲಿ ಇದ್ದು ಇಂತಹ ಶೋಷಣೆಯ ವಿರುದ್ಧ ಹೋರಾಡಲು ಸದಾ ಸಿದ್ಧವಾಗಿರುತ್ತದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ತನ್ನವರಿಗಾಗುವ ಅನ್ನಾಯದ ವಿರುದ್ಧ ಸೊಲ್ಲೆತ್ತಿದ ಸಹಾನುಭೂತಿಯನ್ನು ಚಳುವಳಿಯನ್ನಾಗಿಸಿದ ಆ ದಿಟ್ಟ ಮಹಿಳೆಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಯದಲ್ಲಿ ಒಂದು ದೊಡ್ಡ ಸಲಾಂ.
- ಹಿಂದಿನ ಸಂಚಿಕೆಗಳು :
- ಬದುಕಿಗೊಂದು ಸೆಲೆ (ಭಾಗ -೧)
- ಬದುಕಿಗೊಂದು ಸೆಲೆ (ಭಾಗ -೨)
- ಬದುಕಿಗೊಂದು ಸೆಲೆ (ಭಾಗ -೩)
- ಬದುಕಿಗೊಂದು ಸೆಲೆ ‘ಕೆಲ ವಿಷಯಗಳಿಗೆ ಕಿವುಡರಾಗಬೇಕು’ (ಭಾಗ – ೪)
- ಬದುಕಿಗೊಂದು ಸೆಲೆ ‘ಉದಾರತೆ ಎಂಬ ಮಾರುಕಟ್ಟೆ ತಂತ್ರ’ (ಭಾಗ- ೫)
- ಬದುಕಿಗೊಂದು ಸೆಲೆ ‘ಹೌದು! ನನಗೆ ವಯಸ್ಸಾಗುತ್ತಿದೆ’ (ಭಾಗ – ೬)
- ಬದುಕಿಗೊಂದು ಸೆಲೆ‘ಕಾಯುತ್ತಿದ್ದಾರೆ ನಿಮ್ಮವರು… ನಿಮಗಾಗಿ’ (ಭಾಗ -೭)
- ಬದುಕಿಗೊಂದು ಸೆಲೆ ‘ಹೆಣ್ಣು ಮಕ್ಕಳೇ ಎಚ್ಚರವಾಗಿ’ (ಭಾಗ – ೮)
- ಬದುಕಿಗೊಂದು ಸೆಲೆ ‘ ಮನೆಯ ಆಹಾರವೂ,ಕೌಟುಂಬಿಕ ಬಂಧವೂ’ (ಭಾಗ – ೯)
- ಬದುಕಿಗೊಂದು ಸೆಲೆ ‘ಶ್ರಾವಣ ಮಾಸ… ಶ್ರವಣ ಮಾಸ’ (ಭಾಗ – ೧೦)
- ಬದುಕಿಗೊಂದು ಸೆಲೆ ‘ಪ್ಯಾರಿಸ್ ಸುಗಂಧದ ಖ್ಯಾತಿಯ ಕೋಕೋ ಚಾನೆಲ್…. ಸತತ ಪ್ರಯತ್ನದ ಸಾಫಲ್ಯ’ (ಭಾಗ – ೧೧)
- ಬದುಕಿಗೊಂದು ಸೆಲೆ ವರಮಹಾಲಕ್ಷ್ಮಿ ಹಬ್ಬ (ಭಾಗ – ೧೨)
- ಬದುಕಿಗೊಂದು ಸೆಲೆ ‘ಸಿತಾರೆ ಜಮೀನ್ ಪರ್’ (ಭಾಗ – ೧೪)
- ಬದುಕಿಗೊಂದು ಸೆಲೆ ‘ಸಾಧನೆಯ ಶಿಖರ ಏರಲು…ಬೇಕು ಬದ್ಧತೆ’ (ಭಾಗ – ೧೫)
- ಬದುಕಿಗೊಂದು ಸೆಲೆ ‘ನನ್ನ ಪ್ರೀತಿಯ ಗಣೇಶ’ (ಭಾಗ – ೧೬)
- ಬದುಕಿಗೊಂದು ಸೆಲೆ ‘ಗಣೇಶ….ವಿಗ್ರಹ ಒಂದು ಸಂಕೇತಗಳು ನೂರು’ (ಭಾಗ – ೧೭)
- ಬದುಕಿಗೊಂದು ಸೆಲೆ ‘ನಮ್ಮ ಬದುಕು ಮತ್ತು ಆಯ್ಕೆಗಳು’ (ಭಾಗ – ೧೮)
- ಬದುಕಿಗೊಂದು ಸೆಲೆ ‘ಸ್ನೇಹ ಬಂಧ ’ (ಭಾಗ-೧೯)
- ಬದುಕಿಗೊಂದು ಸೆಲೆ ‘ಮಕ್ಕಳ ಕುರಿತು ಅತಿ ಕಾಳಜಿ…. ಖಂಡಿತ ಬೇಡ’ (ಭಾಗ-೨೦)
- ಬದುಕಿಗೊಂದು ಸೆಲೆ ‘ಮಕ್ಕಳ ಸಂಸ್ಕಾರದಲ್ಲಿ ತಾಯಿಯ ಪಾತ್ರ’ (ಭಾಗ-೨೧)
- ಬದುಕಿಗೊಂದು ಸೆಲೆ ‘ಮಗನಿಗೆ ಶಿಸ್ತಿನ ಪಾಠದ ಪತ್ರ’ (ಭಾಗ-೨೨)
- ಬದುಕಿಗೊಂದು ಸೆಲೆ ‘ಭಿತ್ತಿಯಲ್ಲಿ ನೆನಪಾಗಿ ಉಳಿದ… ಎಸ್ ಎಲ್ ಭೈರಪ್ಪ’ (ಭಾಗ-೨೩)
- ಬದುಕಿಗೊಂದು ಸೆಲೆ “ದ ಹ್ಯಾಪಿಯಸ್ ಮ್ಯಾನ ಆನ್ ದ ಅರ್ಥ’ (ಭಾಗ-೨೪)
- ಬದುಕಿಗೊಂದು ಸೆಲೆ ‘ಎಲ್ಲ ಏಟಿಗೂ ಇದಿರೇಟು….ಉತ್ತರವಲ್ಲ’ (ಭಾಗ-೨೫)
- ಬದುಕಿಗೊಂದು ಸೆಲೆ ‘ಗಂಡು ಹೆಣ್ಣು…. ಒಂದು ಸಾಮಾಜಿಕ ವಿಶ್ಲೇಷಣೆ’ (ಭಾಗ-೨೬)
- ಬದುಕಿಗೊಂದು ಸೆಲೆ ‘ಮೂಲಭೂತ ಅಭ್ಯಾಸಗಳು ಮತ್ತು ಮಕ್ಕಳು’ (ಭಾಗ-೨೭)
- ಬದುಕಿಗೊಂದು ಸೆಲೆ ‘ಬೆಳಕಿನ ಹಬ್ಬ ದೀಪಾವಳಿ ’ (ಭಾಗ-೨೮)
- ಬದುಕಿಗೊಂದು ಸೆಲೆ ‘ಸಡಗರ ಸಂಭ್ರಮದ ಕನ್ನಡ ರಾಜ್ಯೋತ್ಸವ’ (ಭಾಗ-೨೯)
- ಬದುಕಿಗೊಂದು ಸೆಲೆ ‘ಸಡಗರ ಸಂಭ್ರಮದ ಕನ್ನಡ ರಾಜ್ಯೋತ್ಸವ’ (ಭಾಗ-೩೦)
- ಬದುಕಿಗೊಂದು ಸೆಲೆ ‘ನಿಮ್ಮ ಮಕ್ಕಳ ವರ್ತನೆ ಮಿತಿಯಲ್ಲಿರಲಿ… ಯಾವುದೂ ಅತಿಯಾಗದಿರಲಿ ’ (ಭಾಗ-೩೧)
- ಬದುಕಿಗೊಂದು ಸೆಲೆ ಹಸಿರಲ್ಲಿ ಒಂದಾದ ಸಾಲುಮರದ ತಿಮ್ಮಕ್ಕ (ಭಾಗ-೩೨)
- ಬದುಕಿಗೊಂದು ಸೆಲೆ (ಭಾಗ-೩೩)
- ಬದುಕಿಗೊಂದು ಸೆಲೆ ‘ಪ್ರೀತಿಯ ತೀವ್ರತೆ’ (ಭಾಗ-೩೪)
- ಬದುಕಿಗೊಂದು ಸೆಲೆ ‘ಖಾಲಿ ಕುರ್ಚಿ ಎಂಬ ತತ್ವವೂ…ನಮ್ಮ ಬದುಕೂ’ (ಭಾಗ-೩೫)
- ಬದುಕಿಗೊಂದು ಸೆಲೆ ‘ಒಂದು ಸುತ್ತು….ಋತುಚಕ್ರ ರಜೆಯ ಸುತ್ತ’ (ಭಾಗ-೩೬)
- ಬದುಕಿಗೊಂದು ಸೆಲೆ ‘ಮೌನ ಸಾಧನೆ’ (ಭಾಗ-೩೭)
- ಬದುಕಿಗೊಂದು ಸೆಲೆ ‘ಮಹತ್ವಕಾಂಕ್ಷಿ ಕ್ರೀಡಾ ಯೋಜನೆಗಳು ಹಾಗೂ ಕ್ರೀಡೆಯ ಭವಿಷ್ಯ??’ (ಭಾಗ-೩೮)
- ಬದುಕಿಗೊಂದು ಸೆಲೆ ‘ಮಾಧ್ಯಮಗಳ ವೈಭವೀಕೃತ ಸುದ್ದಿ ನಿರೂಪಣೆ…. ಒಂದು ವಿವೇಚನೆ’ (ಭಾಗ-೩೯)
- ಬದುಕಿಗೊಂದು ಸೆಲೆ ‘ಎಳ್ಳು ಅಮಾವಾಸ್ಯೆ…ಚರಗ ಚೆಲ್ಲುವ ಹಬ್ಬನೆ’ (ಭಾಗ-೪೦)
- ಬದುಕಿಗೊಂದು ಸೆಲೆ ‘ಅವರಿವರನ್ನು ಕಂಡು ಕರುಬದಿರಿ… ನೀವು ನೀವಾಗಿಯೇ ಇರಿ’ (ಭಾಗ-೪೧)
- ಬದುಕಿಗೊಂದು ಸೆಲೆ ‘ಶ್ರೀ ಸಿದ್ದೇಶ್ವರ ಸ್ವಾಮಿಗಳು’ (ಭಾಗ-೪೨)
- ಬದುಕಿಗೊಂದು ಸೆಲೆ ‘ಯುವ ಜನತೆಗೆ ಹಣಕಾಸಿನ ಕುರಿತಾದ ಚಿನ್ನದಂತಹ ನಿಯಮಗಳು’ (ಭಾಗ-೪೩)
- ಬದುಕಿಗೊಂದು ಸೆಲೆ ‘ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವುದು ಹೇಗೆ ?’ (ಭಾಗ-೪೪)
- ಬದುಕಿಗೊಂದು ಸೆಲೆ ‘ದಾಂಪತ್ಯದಲ್ಲಿ ಸಮಾನತೆ ’ (ಭಾಗ-೪೫)
- ಬದುಕಿಗೊಂದು ಸೆಲೆ ‘ಹೀಗೊಂದು ವಧು/ವರ ಪರೀಕ್ಷೆ ’ (ಭಾಗ-೪೭)
- ಬದುಕಿಗೊಂದು ಸೆಲೆ ‘ಒಂಟಿ ಧ್ವನಿಗೆ… ಜಂಟಿಯಾದ ನೂರಾರು ಧ್ವನಿಗಳು’ (ಭಾಗ-೪೮)
- ಬದುಕಿಗೊಂದು ಸೆಲೆ ‘ಹಕ್…… ತನ್ನ ಹಕ್ಕಿಗಾಗಿ ಹೆಣ್ಣು ಮಗಳ ಹೋರಾಟ’ (ಭಾಗ-೪೯)
- ಬದುಕಿಗೊಂದು ಸೆಲೆ ಶಾಂತಿ ಸುಧಾ ಘೋಷ್ (ಭಾಗ- ೫೧)
- ಬದುಕಿಗೊಂದು ಸೆಲೆ ಪೋಲ್ಯಾಂಡ್ ದೇಶದ ಮಕ್ಕಳ ದುರಂತದ ಕತೆ (ಭಾಗ- ೫೨)
- ಬದುಕಿಗೊಂದು ಸೆಲೆ ಕಾಶಿಯ ಲತಾ ಮಂಗಳ ಕಪೂರ್ ಗೆ ಪದ್ಮಶ್ರೀ ಪುರಸ್ಕಾರ (ಭಾಗ- ೫೩)
- ಬದುಕಿಗೊಂದು ಸೆಲೆ ‘ಶಿವರಾತ್ರಿ, ಶಿವನ ಆರಾಧನೆಯ ದಿನ’ (ಭಾಗ- ೫೪)
- ಬದುಕಿಗೊಂದು ಸೆಲೆ ‘ಅಸಹನೀಯವಾಗದಿರಲಿ ವೃದ್ಧಾಪ್ಯ’ (ಭಾಗ- ೫೫)
- ಬದುಕಿಗೊಂದು ಸೆಲೆ ‘ಸಮತೋಲಿತ ಆಹಾರ’ (ಭಾಗ- ೫೬)
- ಬದುಕಿಗೊಂದು ಸೆಲೆ ‘ನವಜಾತ ಶಿಶು ವಿಜ್ಞಾನ ಶಾಸ್ತ್ರದ ಮಹಾತಾಯಿ….ಡಾಕ್ಟರ್ ಅಮಿದಾ ಫರ್ನಾಂಡಿಸ್’ (ಭಾಗ- ೫೭)
- ಬದುಕಿಗೊಂದು ಸೆಲೆ ‘ಬಣ್ಣಗಳ ಹಬ್ಬ…. ಹೋಳಿ’ (ಭಾಗ- ೫೮)
- ಬದುಕಿಗೊಂದು ಸೆಲೆ ‘ಇರಲಿ ಆಸರೆ, ಹಿರಿ ಜೀವಗಳಿಗೆ ’ (ಭಾಗ- ೫೯)
- ಬದುಕಿಗೊಂದು ಸೆಲೆ ‘ಸಂಕಲ್ಪ ಶಕ್ತಿ ಮತ್ತು ಯಶೋಗಾಥೆ ’ (ಭಾಗ- ೬೦)
- ವೀಣಾ ಹೇಮಂತ್ ಗೌಡ ಪಾಟೀಲ್ – ಮುಂಡರಗಿ, ಗದಗ.
