ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಚುನಾವಣಾ ಕಣದಲ್ಲಿ ಅಭ್ಯರ್ಥಿಗಳು ಎರೆಡೆರಡು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಏ.೨೦ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಮೊದಲ ದಿನವೇ ೨೨೧ ನಾಮಪತ್ರಗಳು ಸಲ್ಲಿಕೆಯಾಗಿವೆ.
ಸಚಿವರಾದ ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಮುರುಗೇಶ್ ನಿರಾಣಿ, ಸುನಿಲ್ ಕುಮಾರ್, ಸಿ.ಸಿ.ಪಾಟೀಲ್ ಮತ್ತು ಕಾಂಗ್ರೆಸ್‌ನಿಂದ ಶಾಸಕ ಶಿವಾನಂದ ಪಾಟೀಲ್, ರೂಪಕಲಾ, ರಾಜಶೇಖರ್, ಗಂಗಾಬಿಕೆ ಮಲ್ಲಿಕಾರ್ಜುನ್ ಸೇರಿದಂತೆ ಇತರೆ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಕೆ ಮಾಡಿದರು.
೨೨೧ ನಾಮಪತ್ರಗಳ ಪೈಕಿ ೧೯೭ ನಾಮಪತ್ರಗಳನ್ನು ಪುರುಷರು, ೨೪ ನಾಮಪತ್ರಗಳನ್ನು ಮಹಿಳೆಯರು ಸಲ್ಲಿಸಿದ್ದಾರೆ. ಬಿಜೆಪಿಯಿಂದ ೨೭, ಕಾಂಗ್ರೆಸ್‌ನಿಂದ ೨೬, ಜೆಡಿಎಸ್‌ನಿಮದ ೧೨, ಎಎಪಿಯಿಂದ ೧೦, ಬಿಎಸ್‌ಪಿಯಿಂದ ಒಂದು ನಾಮಪತ್ರಗಳು ಸಲ್ಲಿಕೆಯಾಗಿವೆ. ನೋಂದಾಯಿತ ಪಕ್ಷಗಳಿಂದ ಗುರುತಿಸಿರುವ ೧೦೦ ನಾಮಪತ್ರಗಳು ಸಲ್ಲಿಕೆ ಮಾಡಲಾಗಿದೆ. ಇನ್ನು, ೪೫ ನಾಮಪತ್ರಗಳು ಪಕ್ಷೇತರರಿಂದ ಸಲ್ಲಿಕೆಯಾಗಿವೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ತಮ್ಮ ಕಾರ್ಯಕರ್ತರು, ಬೆಂಬಲಿಗರಿಂದ ಮೆರವಣಿಗೆಯಲ್ಲಿ ಸಾಗಿ ಉಮೇದುವಾರಿಕೆಯನ್ನು ಸಲ್ಲಿಕೆ ಮಾಡಿದರು. ಹಲವು ಅಭ್ಯರ್ಥಿಗಳು ಎರಡೆರಡು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ.
- ಆಕೃತಿನ್ಯೂಸ್