ಮನರೇಗಾ ಉದ್ಯೋಗ ರಥ ಪ್ರಚಾರ ವಾಹಿನಿಗೆ ಚಾಲನೆ

ತಾಲೂಕು ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಒಂದು ತಿಂಗಳ ಕಾಲ ತಾಲೂಕಿನ 33 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉದ್ಯೋಗ ನಡಿಗೆ ಸುಸ್ತಿರತೆ ಎಡೆಗೆ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಹಾವೇರಿ ತಾಲೂಕ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಭರತ್ ಹೆಗಡೆ ತಿಳಿಸಿದ್ದಾರೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಸೂಚನೆಯಂತೆ ನರೇಗಾ ಯೋಜನೆಯ 2024-25 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ವೇಳಾ ಪಟ್ಟಿ ನಿಗದಿಪಡಿಸಿ, ಕಾಲ ಮಿತಿಯೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಿರುವ ಹಿನ್ನಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆ ಮನೆ ಜಾಥಾ ಹಾಗೂ ರೋಜ್ಜಾರ್ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ.

ಹಾವೇರಿ ತಾಲೂಕ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಭರತ್ ಹೆಗಡೆ

ತಾಲೂಕಿನ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದೊರೆಯುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳು ಹಾಗೂ ವೈಯಕ್ತಿಕ ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು, ಯೋಜನೆಯಡಿ ದೊರೆಯುವ ಕೂಲಿಯ ಮೊತ್ತ, ಗಂಡು ಹೆಣ್ಣಿಗೆ ಸಮಾನ ಕೂಲಿ, ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿಯ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕೆಲಸದ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಶೇ. 50 ರಿಯಾಯಿತಿ, ಕಾಮಗಾರಿ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳು, ಅಕುಶಲ ಮಹಿಳೆಯರು ಮತ್ತು ನಿರ್ವಹಿಸುವ ಕೆಲಸಕ್ಕೆ ಕಾರ್ಮಿಕರಿಗೆ ಶೇ.20ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ, ಸಿಗಲಿದೆ ಎಂದು ತಿಳಿಸಿದರು.

ಸ್ವ ಸಹಾಯ ಸಂಘಗಳಲ್ಲಿ ಮಹಿಳೆಯರಿಗೆ ಸಿಗುವ ಸೌಲಭ್ಯಗಳು ಹಾಗೂ ಯೋಜನೆಯಡಿ ರೈತರಿಗೆ ದೊರೆಯವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಒದಗಿಸಿ ಕೂಲಿ ಬೇಡಿಕೆ ಹಾಗೂ ಕಾಮಗಾರಿ ಬೇಡಿಕೆಯನ್ನು ಹಾಗೂ ಅರ್ಜಿಗಳನ್ನು ಅಭಿಯಾನದಡಿ ಸಂಗ್ರಹಿಸಲಾಗುತ್ತದೆ.

ಉದ್ಯೋಗ ಕಾತರಿ ನಡಿಗೆ ಸುಸ್ಥಿರತೆ ಎಡೆಗೆ ಅಭಿಯಾನವನ್ನು ತಾಲೂಕಿನ ಎಲ್ಲಾ 33 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿದ್ದು, ಈ ಕುರಿತು ಐಇಸಿ ಚಟುವಟಿಕೆ ಗಳು ಹಾಗೂ ಪ್ರಚಾರ ವಾಹಿನಿ ಬಳಸಿಕೊಂಡು ಸಾರ್ವಜನಿಕರಿಗೆ ಯೋಜನೆಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಕಾಮಗಾರಿ ಬೇಡಿಕೆ ಪೆಟ್ಟಿಗೆಯನ್ನು ಮನೆ ಮನೆಗೆ ತೆರಳಿ ಕರಪತ್ರಗಳನ್ನು ವಿತರಿಸುವ ಮೂಲಕ ನರೇಗಾ ಯೋಜನೆ ಮತ್ತು ಜಲಸಂಜೀವಿನ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಮತ್ತು ಗ್ರಾಮ ಪಂಚಾಯಿತಿಯಲ್ಲಿ ಇಡಲಾಗುತ್ತದೆ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಸಹ ಅದರಲ್ಲಿ ಹಾಕಬಹುದು. ಈ ಅಭಿಯಾನದಲ್ಲಿ ಸಾರ್ವಜನಿಕರು ಈ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಪ್ರದೀಪ್ ಗಣೇಶ್ ಕರ , ಸಂದೀಪ್ ಎಸ್ ಡಿ. ಆಡಳಿತ ವಿಭಾಗ ತಾಲೂಕು ಪಂಚಾಯತಿ ವ್ಯವಸ್ಥಾಪಕರಾದ ರಮೇಶ್ ಅಕ್ಕಿ ಐ ಇ ಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು , ಎಮ್ ಐಸ್ ಸಂಯೋಜಕರು ಸಿಬ್ಬಂದಿ ವರ್ಗದವರು ಹಾಜರಿದ್ದರು.


  • ಆಕೃತಿ ನ್ಯೂಸ್

Leave a Reply

Home
Search
Menu
Recent
About
×

Discover more from ಆಕೃತಿ ಕನ್ನಡ

Subscribe now to keep reading and get access to the full archive.

Continue reading