ಮುಷ್ತಾಕ್ ಹೆನ್ನಾಬೈಲ್ “ಮನಲೋಕ” ಬಿಡುಗಡೆ



ಮುಷ್ತಾಕ್ ಹೆನ್ನಾಬೈಲ್ ಅವರ “ಮನಲೋಕ” ಪುಸ್ತಕ ಬಿಡುಗಡೆ ಕಾರ್ಯಕ್ರಮ ಭಾನುವಾರದಂದು ಸಾಹಿತ್ಯಾಸಕ್ತರ ನಡುವೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಕುರಿತು ವರದಿ ಇಲ್ಲಿದೆ. ಮುಂದೆ ಓದಿ…

ಲೇಖಕನಾದವನು ಸದಾ ಸೃಜನಶೀಲತೆಯೊಂದಿಗೆ ಓದುಗರಿಗೆ ನವನವೀನ ವಿಚಾರಗಳು ತಿಳಿಸುತ್ತಿರಬೇಕು. ಸಾಮಾನ್ಯವಾಗಿ ಸುದೀರ್ಘವಾಗಿರುವ ಪುಸ್ತಕದ ಓದು ಜ್ಞಾನಶೀಲ ಮಾತ್ರವಲ್ಲ ಪರಿವರ್ತನಾಶೀಲವೂ ಆಗಿರಬೇಕು. ಹೀಗಿನ ಆಶಯಕ್ಕೆ ಪೂರಕವಾಗಿ ಮನಲೋಕದಲ್ಲಿ ಪ್ರಕಟವಾಗಿರುವ ಎಲ್ಲ ಲೇಖನಗಳು ಇತಿಹಾಸದ ರೋಚಕ ಮಾಹಿತಿಗಳು ಮತ್ತು ವರ್ತಮಾನದ ವಾಸ್ತವಗಳಿಂದ ಕೂಡಿದೆ. ಸಾಹಿತ್ಯಲೋಕದಲ್ಲಿ ದಿನದಿಂದ ದಿನಕ್ಕೆ ಓದುಗರ ಪ್ರೀತಿಗೆ ಪಾತ್ರರಾಗುತ್ತಿರುವ ವಿಶಿಷ್ಟ ಶೈಲಿಯ ಲೇಖಕ ಮುಷ್ತಾಕ್ ಹೆನ್ನಾಬೈಲರ ಭಾಷೆ, ವಿಚಾರ, ವಿವೇಕವು ಮುಂಬರುವ ದಿನಗಳಲ್ಲಿ ಕನ್ನಡದ ಸಮಸ್ತ ಓದುಗರಿಗೆ ಸದಾಕಾಲ ರೋಮಾಂಚಕ ಮೂಡಿಸುವುದು ನಿಶ್ಚಿತ. ಅವರೊಬ್ಬ ನಾನು ಕಂಡ ಅದ್ಭುತ ಅಧ್ಯಯನಶೀಲ ಪರಿಪೂರ್ಣ ಲೇಖಕ ಎಂದು ಕೋಟಾದ ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ವೇದಿಕೆಯ ಗಾಂಧಿ ವಿಚಾರ ವೇದಿಕೆ ಬ್ರಹ್ಮಾವರ ಘಟಕದ ಉದ್ಘಾಟನೆ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಷ್ತಾಕ್ ಹೆನ್ನಾಬೈಲ್ ರವರ “ಮನಲೋಕ” ಕೃತಿಯನ್ನು ಬಿಡುಗಡೆ ಮಾಡಿ ಮಂಗಳೂರಿನ ಹಿರಿಯ ಲೇಖಕಿ-ಸಂಶೋಧಕಿ ಶ್ರೀಮತಿ ರೋಹಿಣಿ ಬಿ ಎಮ್ ಹೇಳಿದರು.

ನೂತನವಾದ ಗಾಂಧಿ ವಿಚಾರ ವೇದಿಕೆಯ ಬ್ರಹ್ಮಾವರ ಘಟಕವನ್ನು ಗಾಂಧಿ ವಿಚಾರ ವೇದಿಕೆಯ ಮಾತೃ ಸಮಿತಿಯ ಅಧ್ಯಕ್ಷ ಶ್ರೀಧರ ಭಿಡೆ ಉದ್ಘಾಟಿಸಿದರು. ಲೇಖಕ ಸೋಮಪ್ರಕಾಶ್ ಆರ್ಯರವರ ಮಂಟೆಸ್ವಾಮಿ ಮಹಾಕಾವ್ಯ ಕೃತಿಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಚಿನ್ನಪ್ಪ ಗೌಡ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ ವತಿಯಿಂದ ಲೇಖಕರನ್ನು ಸಮ್ಮಾನಿಸಲಾಯಿತು. ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರು ಸಭೆಯ ಅಧ್ಯಕ್ಷತೆಯನ್ನು ವಹಿಸಿದರು. ಲೇಖಕ ಅರವಿಂದ ಚೊಕ್ಕಾಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಜಯೀಂದ್ರ ಹಂದೆ ಧನ್ಯವಾದಗೈದರು.


  • ಆಕೃತಿ ನ್ಯೂಸ್
0 0 votes
Article Rating

Leave a Reply

0 Comments
Inline Feedbacks
View all comments
Home
Search
Menu
Recent
About
×

Discover more from ಆಕೃತಿ ಕನ್ನಡ

Subscribe now to keep reading and get access to the full archive.

Continue reading

0
Would love your thoughts, please comment.x
()
x
Aakruti Kannada

FREE
VIEW