‘ನಮ್ಮ ನಿಮ್ಮೊಳಗೊಬ್ಬ ನಸ್ರುದ್ದೀನ್’ ಪುಸ್ತಕದ ಒಂದು ನೋಟ

ಮುಲ್ಲಾ ನಸ್ರುದ್ದೀನ್ ಅಥವಾ ನಸ್ರುದ್ದೀನ್ ಖೋಜಾ ಅಥವಾ ಬರೇ ನಸ್ರುದ್ದೀನ್ ಎನ್ನುವ ವ್ಯಕ್ತಿ ಜಗತ್ತಿನಾದ್ಯಂತ ಹಲವಾರು ಸಂಸ್ಕೃತಿಗಳಲ್ಲಿ ವಿಶಿಷ್ಟ ಮನರಂಜನೆಯ ಕತೆಗಳಲ್ಲಿ ರಂಜಿಸಿದ್ದಾನೆ. ಆ ಕತೆಗಳ ಉದ್ದೇಶ ಬರೇ ಮನರಂಜನೆಯಷ್ಟೇ ಆಗಿಲ್ಲ. ಮುಂದೆ ಓದಿ ಅನುವಾದಕ ಡಾ.ಜೆ.ಬಾಲಕೃಷ್ಣ ಅವರ ಸ್ವರಚಿತ `ನಮ್ಮ ನಿಮ್ಮೊಳಗೊಬ್ಬ ನಸ್ರುದ್ದೀನ್’ ಪುಸ್ತಕದ ಕುರಿತು ಒಂದು ಲೇಖನ…

ಪುಸ್ತಕ : ನಮ್ಮ ನಿಮ್ಮೊಳಗೊಬ್ಬ ನಸ್ರುದ್ದೀನ್
ಅನುವಾದ : ಡಾ.ಜೆ.ಬಾಲಕೃಷ್ಣ
ಪ್ರಕಾಶನ : ಅಸೀಮ ಅಕ್ಷರ, ಬೆಂಗಳೂರು
ಬೆಲೆ : ೪೦ /
ಖರೀದಿ : j.balakrishna@gmail.com/ aseemaakshara@gmail.com

ನಿನಗೆ ವಿಶೇಷ ಜ್ಞಾನದರಿವು ಬೇಕಾದಲ್ಲಿ
ಯಾರದಾದರೂ ಮುಖ ನೋಡು:
ಆಳವಾಗಿ ನೋಡು,
ಆ ವ್ಯಕ್ತಿಯ ನಗುವಿನೊಳಗೆ,
ಜ್ಞಾನದ ಅಂತಿಮ ಸತ್ಯವಿದೆ…

– ಜಲಾಲುದ್ದೀನ್ ರೂಮಿ

 

ಮುಲ್ಲಾ ನಸ್ರುದ್ದೀನ್ ಅಥವಾ ನಸ್ರುದ್ದೀನ್ ಖೋಜಾ ಅಥವಾ ಬರೇ ನಸ್ರುದ್ದೀನ್ ಎನ್ನುವ ವ್ಯಕ್ತಿ ಜಗತ್ತಿನಾದ್ಯಂತ ಹಲವಾರು ಸಂಸ್ಕೃತಿಗಳಲ್ಲಿ ವಿಶಿಷ್ಟ ಮನರಂಜನೆಯ ಕತೆಗಳಲ್ಲಿ ರಂಜಿಸಿದ್ದಾನೆ. ಆ ಕತೆಗಳ ಉದ್ದೇಶ ಬರೇ ಮನರಂಜನೆಯಷ್ಟೇ ಆಗಿಲ್ಲ. ಸೂಫಿ ದಾರ್ಶನಿಕರ ಬೋಧನಾ ಕತೆಗಳಲ್ಲಿಯಂತೆ ಅವುಗಳ ಒಳಾರ್ಥವೇ ಬೇರೆಯಾಗಿರುತ್ತದೆ. ಸೂಫಿಗಳಿಗೆ ಆ ವ್ಯಕ್ತಿ ಮುಖ್ಯವಲ್ಲ ಆದರೆ ಆತನ ಸಂದೇಶ ಮುಖ್ಯವಾದುದು. ನಸ್ರುದ್ದೀನ್ ಯಾರು, ಆತ ಎಲ್ಲಿ ಜೀವಿಸಿದ್ದ ಅಥವಾ ಯಾವಾಗ ಜೀವಿಸಿದ್ದ ಎನ್ನುವುದು ಯಾರಿಗೂ ಸರಿಯಾಗಿ ತಿಳಿದಿಲ್ಲ ಅಥವಾ ಆತನದು ಬರೇ ಒಂದು ಕಾಲ್ಪನಿಕ ಪಾತ್ರವೇ ಎಂಬುದೂ ಸಹ ತಿಳಿದಿಲ್ಲ. ಏನೇ ಆದರೂ ಆತನದು ದೇಶ ಕಾಲಗಳನ್ನು ಮೀರಿದ ವ್ಯಕ್ತಿತ್ವ. ಆದರೂ ಜನ ಆ ವ್ಯಕ್ತಿಗೆ ಚರಿತ್ರೆಯ ಒಂದು ಹಂದರ ಒದಗಿಸಿದ್ದಾರೆ ಹಾಗೂ ಅದೇ ರೀತಿ ಒಂದು ಸಮಾಧಿಯನ್ನೂ ಸಹ ನೀಡಿದ್ದಾರೆ. ತನ್ನ ಹಲವಾರು ಕತೆಗಳಲ್ಲಿ ನಸ್ರುದ್ದೀನ್ ದಡ್ಡನಂತೆ ಕಂಡುಬರುತ್ತಾನೆ. ಆದರೆ ನಸ್ರುದ್ದೀನ್ ಒಬ್ಬ ಸೂಫಿ ಅನುಭಾವಿ, ತತ್ವಜ್ಞಾನಿ, ವಿವೇಕಿ ಮತ್ತು ಅತಿಯಾದ ಹಾಸ್ಯಪ್ರಜ್ಞೆಯುಳ್ಳ ವ್ಯಕ್ತಿಯಾಗಿದ್ದ.

ಹಲವಾರು ಸೂಫಿಗಳು ತಮ್ಮ ಅನುಭಾವದ ‘ಹುಚ್ಚುತನ’ವನ್ನು ಮುಠ್ಠಾಳತನದ ಸೋಗಿನಲ್ಲಿ ವ್ಯಕ್ತಪಡಿಸುತ್ತಾರೆ. ನಸ್ರುದ್ದೀನನೇ ಹೇಳಿಕೊಂಡಿರುವಂತೆ ಆತನೆಂದೂ ಸತ್ಯವನ್ನು ನುಡಿದೇ ಇಲ್ಲ. ಆತನ ಕತೆಗಳು ಟರ್ಕಿಯ ಗುಡ್ಡಗಾಡು ಜನರಿಂದ ಹಿಡಿದು ಆಗಿನ ಪರ್ಷಿಯಾ, ಅರೇಬಿಯಾ, ಆಫ್ರಿಕಾ, ರಷ್ಯಾ ಹಾಗೂ ‘ಸಿಲ್ಕ್ ರೂಟ್’ನ ಮೂಲಕ ಚೀನಾ ಹಾಗೂ ಭಾರತಕ್ಕೆ ಆನಂತರ ಯೂರೋಪಿಗೂ ಹರಡಿವೆ. ಸುಮಾರು ಎಂಟು ನೂರು ವರ್ಷಗಳಿಂದ ಚಾಲ್ತಿಯಲ್ಲಿರುವ ಆತನ ಕತೆಗಳು ಎಲ್ಲವೂ ಆತನವೇ ಅಲ್ಲ. ಅಲ್ಬೇನಿಯಾ, ಅರೇಬಿಕ್, ಅರ್ಮೇನಿಯ, ಬರ್ಬರ್, ಬೋಸ್ನಿಯಾ, ಬಲ್ಗೇರಿಯಾ, ಚೀನಿ, ದಾಗೇಸ್ತಾನಿ, ಗ್ರೀಕ್, ಜುಡಿಯೋ-ಅರೇಬಿಕ್, ಕುರ್ದಿಶ್, ಮಾಲ್ಟೀಸ್, ಮಾಂಡಾಯಿಕ್, ಮ್ಯಾಸಿಡೋನಿಯಾ, ಪರ್ಷಿಯಾ, ಸರ್ಬಿಯಾ, ಸಿಸಿಲಿ, ಸಿರಿಯಾ, ತಾಜಿಕಿಸ್ತಾನ್, ಟರ್ಕಿ, ಐಗುರ್ ಮತ್ತು ಉಜ್ಬೇಕಿಸ್ತಾನ್ ಸಂಸ್ಕೃತಿ ಮತ್ತು ಜನಪದದಲ್ಲಿ ನಸ್ರುದ್ದೀನ್‌ನ ಕತೆಗಳಿವೆ.


  • ಜೆ. ಬಾಲಕೃಷ್ಣ – ಅಂತರಗಂಗೆ ಬ್ಲಾಗ್ ಸಂಸ್ಥಾಪಕ, ಖ್ಯಾತ ಬರಹಗಾರರು – ವ್ಯಂಗ್ಯಚಿತ್ರಕಾರರು – ಅನುವಾದಕರು – ಕನ್ನಡ ಪ್ರೊಫೆಸರ್. 

Leave a Reply

Home
Search
Menu
Recent
About
×

Discover more from ಆಕೃತಿ ಕನ್ನಡ

Subscribe now to keep reading and get access to the full archive.

Continue reading