ಖ್ಯಾತ ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ(೬೧) ಇಂದು ನಿಧನರಾಗಿದ್ದಾರೆ.

ಸುಧೀಂದ್ರ ಹಾಲ್ದೊಡ್ಡೇರಿ ಸುಪ್ರಸಿದ್ಧ ವಿಜ್ಞಾನ ಬರಹಗಾರು, ಡಿಆರ್‌ಡಿಒದ ಮಾಜಿ ವಿಜ್ಞಾನಿ, ಎಚ್‌ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಎಂಜಿನಿಯರ್ ಆಗಿದ್ದರು. ಏಳು ದಿನಗಳ ಹಿಂದೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿತ್ತು. ಹೃದಯಾಘಾತ ಸಂಭವಿಸಿದ ಬಳಿಕ ಮೆದುಳಿಗೆ ಆಮ್ಲಜನಕ ಸರಬರಾಜು ಆಗುವುದು ನಿಂತಿತ್ತು, ಅವರ ಮೆದುಳು ಬಹುತೇಕ ನಿಷ್ಕ್ರಿಯಗೊಂಡಿತ್ತು.ಇದರಿಂದಾಗಿ ಅವರು ಸಾವು-ಬದುಕಿನ ನಡುವೆ ಹೋರಾಟವನ್ನು ನಡೆಸುತ್ತಿದ್ದರು. ಈ ಮಧ್ಯೆ ಅವರ ಮೆದುಳು ನಿಷ್ಕ್ರಿಯ ಹಂತಕ್ಕೆ ತಲುಪಿತ್ತುಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.
ಅವರ ದೇಹದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದು, ಬೆಂಗಳೂರಿನ ಮೆಡಿಕಲ್ ಕಾಲೇಜಿಗೆ ಅಂಗಾಂಗದಾನ ಮಾಡಲಾಗುತ್ತದೆ ಎನ್ನಲಾಗಿದೆ.
ಅವರ ಮಗಳು ಮೇಘನಾ ಹಾಲ್ದೊಡ್ಡೇರಿ ಕೂಡಾ ಬರಹಗಾರರಾಗಿದ್ದು ಜಯನಗರ ಹುಡುಗಿ, #AIಕಥೆಗಳು, ಸೇರಿದಂತೆ ಅತ್ಯುತ್ತಮ ಕೃತಿಗಳನ್ನು ಈಗಾಗಲೇ ಸಾಹಿತ್ಯಲೋಕಕ್ಕೆ ನೀಡಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ.