ಶಿಕ್ಷಕರ ದಿನಾಚರಣೆಯ ಶುಭಾಶಯಗಳು

ಸೆ 5 ರಂದು ಶಿಕ್ಷಕರ ದಿನಾಚರಣೆ. ಎಲ್ಲಾ ಶಾಲೆ ಕಾಲೇಜುಗಳಲ್ಲಿ ಶಿಕ್ಷಕರ ದಿನಾಚರಣೆ ಆಚರಿಸುತ್ತಾರೆ. ದೇಶ ಕಂಡ ಶ್ರೇಷ್ಠ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ನಮಗೆ ವಿದ್ಯಾ ಕಲಿಸಿದ ಶಿಕ್ಷಕರು ಮತ್ತು ಕೆಲಸ ಹೇಳಿ ಕಲಿಸಿಕೊಟ್ಟ ಗುರುಗಳಿಗೆ ಪ್ರೀತಿಯ ನಮನಗಳು.

ಗುರುಬ್ರಹ್ಮ ಗುರುವಿಷ್ಣು
ಗುರುದೇವೋ ಮಹೇಶ್ವರ
ಗುರುಸಾಕ್ಷಾತ್ ಪರಬ್ರಹ್ಮ
ತಸ್ಮೖೆ ಶ್ರೀ ಗುರುವೇ ನಮಃ

ಈ ಸಾಲುಗಳೇ ಗುರುವಿನ ಮಹತ್ವವನ್ನು ಸಂಪೂರ್ಣವಾಗಿ ತಿಳಿಸಿಬಿಡುತ್ತವೆ. ಎಲ್ಲಾ ಮಕ್ಕಳಿಗೂ ತಾಯಿ ತಂದೆಯೇ ಮೊದಲ ಗುರು. ಮನೆಯ ಮೊದಲ ಪಾಠ ಶಾಲೆ ತನ್ನ ಮಕ್ಕಳಿಗೆ ಮೊದಲನೆಯ ಶಿಕ್ಷಕಿ ತಾಯಿ. ಇಲ್ಲಿ ಗುರುವೇ ಎಲ್ಲವೂ ಮತ್ತು ಅವರಿಂದಲೇ ಎಲ್ಲವೂ ಅನ್ನುವುದು ಸ್ಪಷ್ಟವಾಗುತ್ತದೆ. ಗುರುವಿನ ಸ್ಥಾನ ತುಂಬಾ ಪವಿತ್ರವಾದದ್ದು, ಜವಾಬ್ದಾರಿಯುತವಾದದ್ದು.

ಈ ಸಮಾಜಕ್ಕೆ ಉತ್ತಮ ನಾಗರಿಕರನ್ನು ಕೊಡುವ ಸೃಷ್ಟಿಕರ್ತರು ಗುರು. ಮನುಷ್ಯನಾದ ಮೇಲೆ ತನ್ನ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂದುಕೊಂಡಿರುತ್ತಾರೆ. ಗುರಿ ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದವರು ಗುರು. ‘ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು’ ಅನ್ನೋ ಗಾದೆ ಮಾತು ತುಂಬಾ ಅರ್ಥಪೂರ್ಣವಾಗಿದೆ. ವಿದ್ಯಾರ್ಥಿಗಳು ತಮ್ಮ ಗುರಿಯನ್ನು.. ತಲುಪಬೇಕೆಂದರೆ ಗುರುವಿನ ಸಲಹೆ, ಸಹಕಾರ ಮತ್ತು ಮಾರ್ಗದರ್ಶನ ಇರಲೇಬೇಕು. ಗುರುಗಳ ಸಹಾಯದಿಂದ ಮಾತ್ರ ನಾವು ಅಂದುಕೊಂಡ ಗುರಿ ತಲುಪಬಹುದು. ಗುರುವೇಂದರೆ ಕೇವಲ ಶಿಕ್ಷಕರಲ್ಲ ಜೀವನದಲ್ಲಿ ಸರಿಯಾದದಾರಿ ತೋರುವ ಪ್ರತಿಯೊಬ್ಬರೂ ಗುರುಗಳೇ. ನನ್ನನ್ನು ಜೀವನದಲ್ಲಿ ಉತ್ತಮ ವ್ಯಕ್ತಿಯನಾಗಿ ರೂಪಿಸಲು ನೀವು ಮಾಡಿದ ಎಲ್ಲಾ ಪ್ರಯತ್ನಗಳಿಗೆ ನಾನು ನಿಮಗೆ ಧನ್ಯವಾದ ಅರ್ಪಿಸುತ್ತೇನೆ ನನ್ನ ಎಲ್ಲಾ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.


  • ವಿ.ಎಂ.ಎಸ್.ಗೋಪಿ –  ಲೇಖಕರು, ಸಾಹಿತಿಗಳು, ಬೆಂಗಳೂರು.

0 0 votes
Article Rating

Leave a Reply

0 Comments
Inline Feedbacks
View all comments
Home
Search
Menu
Recent
About
×

Discover more from ಆಕೃತಿ ಕನ್ನಡ

Subscribe now to keep reading and get access to the full archive.

Continue reading

0
Would love your thoughts, please comment.x
()
x
Aakruti Kannada

FREE
VIEW