ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ

ಶ್ರೀಮತಿ ತ್ರಿವೇಣಿ ಶೆಲ್ಲಿಕೇರಿ ಪ್ರತಿಷ್ಠಾನ ಯಂಡಿಗೇರಿ, ಜಿ.ಬಾಗಲಕೋಟೆ, ಇವರಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ರಾಜ್ಯಮಟ್ಟದ “ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ-2025” ಕ್ಕೆ ಕೃತಿಗಳನ್ನು ಆಹ್ವಾನಿಸಿದೆ.

ಆಸಕ್ತ ಲೇಖಕರು ಮತ್ತು ಪ್ರಕಾಶಕರು ಕಥೆ, ಕವನ, ಕಾದಂಬರಿ ಈ ಮೂರು ಪ್ರಕಾರಗಳ ಕೃತಿಗಳನ್ನು ಕಳುಹಿಸಬಹುದು. 2025 ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡಿರುವ ಕೃತಿಗಳ ಮೂರು ಪ್ರತಿಗಳನ್ನು ಕಳುಹಿಸಬೇಕು. ಕೃತಿಗಳ ಲಕೋಟೆಯ ಮೇಲೆ ರಾಜ್ಯಮಟ್ಟದ “ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ- 2025” ಎಂದು ನಮೂದಿಸಬೇಕು. ಕೃತಿಗಳು ಡಿಸೆಂಬರ್ 31, 2025 ರೊಳಗೆ ತಲುಪಬೇಕು. ನಂತರ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.

2026 ರ ಫೆಬ್ರವರಿ ತಿಂಗಳು ಬಾಗಲಕೋಟೆಯಲ್ಲಿ ಆಯೋಜಿಸುವ ಸಮಾರಂಭದಲ್ಲಿ ಆಯ್ಕೆಯಾದ ಕೃತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿಯು ಮೂರು ಪ್ರಕಾರಗಳಿಗೆ ತಲಾ ರೂ, 10,000/- ನಗದು ಬಹುಮಾನ, ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿರುತ್ತದೆಯೆಂದು ಪತ್ರಿಕಾ ಪ್ರಕಟಣೆಯಲ್ಲಿ ಪ್ರತಿಷ್ಠಾನದ ಅಧ್ಯಕ್ಷರು ತಿಳಿಸಿರುತ್ತಾರೆ.

ಈ ವಿಳಾಸಕ್ಕೆ ಕೃತಿಯನ್ನು ಕಳುಹಿಸಿ :
ಮಲ್ಲಿಕಾರ್ಜುನ ಶೆಲ್ಲಿಕೇರಿ,
#19/1/1, ಸಿರಿ,
ಈಶ್ವರ ದೇವಸ್ಥಾನ ಹತ್ತಿರ,
22 ನೇಕ್ರಾಸ್, ವಿದ್ಯಾಗಿರಿ
ಬಾಗಲಕೋಟೆ-587102
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9113528879 ಸಂಪರ್ಕಿಸಲು ಕೋರಿದೆ.


  • ಆಕೃತಿಕನ್ನಡ ನ್ಯೂಸ್

0 0 votes
Article Rating

Leave a Reply

0 Comments
Inline Feedbacks
View all comments
Home
Search
Menu
Recent
About
×

Discover more from ಆಕೃತಿ ಕನ್ನಡ

Subscribe now to keep reading and get access to the full archive.

Continue reading

0
Would love your thoughts, please comment.x
()
x
Aakruti Kannada

FREE
VIEW